Breaking News

ಕರ್ನಾಟಕದಲ್ಲೇ ತಲೆಎತ್ತಲಿದೆ ದೇಶದ ಲೀಥಿಯಂ ಬ್ಯಾಟರಿ ತಯಾರಿಕೆಯ ಅತಿದೊಡ್ಡ ಕಾರ್ಖಾನೆ

Spread the love

ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ಗುರುವಾರ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

 

ಇದು ದೇಶದಲ್ಲೇ ಅತಿದೊಡ್ಡ ಲಿಥಿಯಂ ಆಧರಿತ ಬ್ಯಾಟರಿ ಕೋಶಗಳನ್ನು ಉತ್ಪಾದಿಸುವ ಗಿಗಾ ಫ್ಯಾಕ್ಟರಿ ಆಗಲಿದೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯದಲ್ಲಿ 1,200-1,400 ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ.

ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೋರಿದೆ.

ಕಂಪನಿಗೆ ಸರ್ಕಾರದ ಕಡೆಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ನಿರಾಣಿ ಭರವಸೆ ಇತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ