ಬೆಂಗಳೂರು: 2022-23ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆಯಡಿ ( The Right to Education Act ) ಪ್ರಥಮ ಸುತ್ತಿನ ಲಾಟರಿ ಪ್ರಕ್ರಿಯೆಯನ್ನು ದಿನಾಂಕ 04-04-2022ರಂದು ಆಯೋಜಿಸಿರೋದಾಗಿ ಶಿಕ್ಷಣ ಇಲಾಖೆ ( Education Department ) ತಿಳಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2022-23ನೇ ಸಾಲಿನಲ್ಲಿ ಉಚಿತ ಮಕ್ಕು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ, ಲಾಟರಿ ಮೂಲಕ ಸೀಟು ಹಂಚಿಕೆ ನಡೆಸಲು ಪ್ರಥಮ ಸುತ್ತಿನ ಲಾಟರಿಯನ್ನು ದಿನಾಂಕ 04-04-2022ರಂದು ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ದಿನಾಂಕ 04-04-2022ರಂದು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ 3ನೇ ಮಹಡಿಯ ಸಭಾಂಗಣದಲ್ಲಿ ಪ್ರಥಮ ಸುತ್ತಿನ ಸೀಟು ಹಂಚಿಕೆಗಾಗಿ ಲಾಟರಿ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ www.schooleducation.kar.nic.in ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದ್ದಾರೆ.