ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಡೆದಾಡಿದ ನೆಲದಲ್ಲಿ ಸ್ಪೂರ್ತಿ, ಹೆಮ್ಮೆ ಇದೆ. ಸುಮಾರು 88 ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಈ ಕೆಲಸ ಯಾರು ಮಾಡಿಲ್ಲ. ಆ ದಾಖಲೆ ನಮ್ಮ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. ಶ್ರೀಗಳು ಹಚ್ಚಿದ ಒಲೆಯ ಕಿಚ್ಚು ನಿರಂತರವಾಗಿ ನಡೆಯುತ್ತಿವೆ. ಅವರು ನಮ್ಮ ನಡುವೆ ಜೀವಂತ ಆಗಿದ್ದಾರೆ. ಅವರು ದೈಹಿಕವಾಗಿ ಇಲ್ಲದೆ ಇದ್ದರೂ ಅವರ ನಡೆ ಗೌರವ ನಮ್ಮ ಜೊತೆ ಸದಾ ಇರುತ್ತದೆ. ಬದುಕನ್ನು ಕಟ್ಟಿಕೊಟ್ಟ ಪರಮಪೂಜ್ಯರು ಅವರು. ಎಲ್ಲಾ ಸಮುದಾಯದ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಅದು ಸಾಮಾನ್ಯ ಮಾತಲ್ಲ. ಅದು ದೈವ ಶಕ್ತಿ. ಸ್ವಾಮೀಜಿಯವರು ಯಾವುದೇ ಜಾತಿ ಬೇದ ಮಾಡಿಲ್ಲ. ಸರ್ವೋದಯ ಅಂತ್ಯೋದಯ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ವೇಳೆ, ಸರ್ಕಾರದ ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತೆ ಎಂದು ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 115ನೇ ಜಯಂತಿ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದೆ. ‘ನಡೆದಾಡುವ ದೇವರ ಬಸವ ಭಾರತ’ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.