ಗಂಗಾವತಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಗೆ ಆಗಮಿಸುವ ಪ್ರವಾಸಿಗರಿಗೆ ಎಳೆನೀರು, ತೆಂಗಿನಕಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.
ಹನುಮನಹಳ್ಳಿ ಗ್ರಾಮದ ಖಾಜಾಬಿ ಹತ್ತಿರ ಬೈಕ್ ನಲ್ಲಿಆಗಮಿಸಿದ ಮೂವರು ತೆಂಗಿನ ಕಾಯಿ ಖರೀದಿಸುವ ನೆಪದಲ್ಲಿ ಮಹಿಳೆಯ ಕತ್ತಿನಲ್ಲಿದ್ದ 2ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.ಶುಕ್ರವಾರ ಅಮವಾಸ್ಯೆಯಾಗಿದ್ದರಿಂದ ಹೆಚ್ಚಿನ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ಶನಿವಾರ, ಮಂಗಳವಾರ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು ಹೆಚ್ಚು ಜನಸಂದಣಿ ಇರುತ್ತದೆ. ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದರೂ ವಿಶೇಷ ದಿನಗಳಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆ ನೀಡುವಲ್ಲಿ ವಿಫಲವಾಗಿದೆ.
Laxmi News 24×7