Breaking News

ಕೌಟುಂಬಿಕ ಕಲಹ: ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

Spread the love

ಕೊಳ್ಳೇಗಾಲ: ಪತ್ನಿಯ ಕತ್ತು ಹಿಸುಕಿ ಪತಿಯೇ ಕೊಲೆ ಮಾಡಿರುವ ಘಟನೆ ಪಟ್ಟಣದ ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.

ಚಿನ್ನಮ್ಮ (30) ಮೃತ ದುರ್ದೈವಿ.

10 ವರ್ಷ ಹಿಂದೆ ಕುಮಾರ್ (35) ಹಾಗೂ ಚಿನ್ನಮ್ಮ ಮುದುವೆಯಾಗಿದ್ದರು.

ಇವರಿಬ್ಬರ ನಡುವೆ ಮನಸ್ತಾಪವಿದ್ದ ಹಿನ್ನೆಲೆ, ಪತಿ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಳು. ಗುರುವಾರ ಮುಳ್ಳೂರು ಗ್ರಾಮಸ್ಥರ ಸಮ್ಮಖದಲ್ಲಿ ನ್ಯಾಯ ಪಂಚಾಯಿತಿ ಮಾಡಿ, ಗಂಡನೊಂದಿಗೆ ಕಳುಹಿಸಲಾಗಿತ್ತು. ಮತ್ತೆ ಜಗಳ ಮುಂಜಾನೆ ಆರಂಭವಾಗುತ್ತಿದಂತೆ ಪತಿ, ಪತ್ನಿಯನ್ನು ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.ಮೃತಳಿಗೆ ಇಬ್ಬರು ಮಕ್ಕಳು ಇದ್ದು ಮೃತಳ ಸಹೋದರ ನೀಡಿದ ದೂರನ್ನು ದಾಖಲಿಸಿರುವ ಪಟ್ಟಣ ಠಾಣಾ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

Spread the love ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ