Breaking News

ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ……?: ಪ್ರಮೋದ್ ಮುತಾಲಿಕ್

Spread the love

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ ಎಂದು ಹೇಳುತ್ತಾರೆ. ಹಾಗಾದರೆ ಇಂದ್ರಜಿತ್ ಲಂಕೇಶ್ ರೀತಿ ಕುಮಾರಸ್ವಾಮಿಯವರನ್ನು ಕೂಡ ವಿಚಾರಣೆ ನಡೆಸಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಿದ್ದರಾಮಯ್ಯ ಕೂಡ ಸತ್ತಿದ್ದು ಡ್ರಗ್ಸ್ ನಿಂದಲೇ ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯನವರಿಗೆ ಯುವ ಜನತೆಯೆ ಬಗ್ಗೆ ಕಾಳಜಿ ಇದ್ದಿದ್ದರೆ ಈ ರೀತಿ ಮಾಡ್ತಾ ಇರ್ಲಿಲ್ಲ. ಡ್ರಗ್ಸ್ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡುತ್ತಾರೆ. ಹಾಗಾದ್ರೆ ಇಂದ್ರಜಿತ್ ಲಂಕೇಶ್ ರೀತಿ ಕುಮಾರಸ್ವಾಮಿಯವರನ್ನು ಕೂಡ ವಿಚಾರಣೆಗೆ ಒಳಪಡಿಸಿ ಎಂದು ಮುತಾಲಿಕ್ ಆಗ್ರಹಿಸಿದರು


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ