Breaking News

ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ

Spread the love

ಬೆಂಗಳೂರು : ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ. ಪ್ರಸ್ತುತ ರೈಲ್ವೆ ವಿಭಾಗದ ಎಡಿಜಿಪಿ ಆಗಿದ್ದ ಭಾಸ್ಕರ್‌ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ಈ ಹಿನ್ನೆಲೆಯಲ್ಲಿ ಭಾವನಾತ್ಮಕ ಟ್ವೀಟ್ ಮಾಡಿರುವ ಅವರು, ಕಚೇರಿಯಿಂದ ಮನೆಯ ಕಡೆ ಕೊನೆಯ ಟ್ರಿಪ್ ಎಂದು ಬರೆದು, ಸಿಬ್ಬಂದಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

2021ರ ಸೆಪ್ಟೆಂಬರ್‌ನಲ್ಲಿ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದ ಭಾಸ್ಕರ್ ರಾವ್, ಸರ್ಕಾರವು ಕೂಡಲೇ ಅದನ್ನು ಪರಿಗಣಿಸಬೇಕು ಎಂದು ಕೋರಿದ್ದರು. ಕಳೆದ 7 ತಿಂಗಳಿಂದ ಕೇಂದ್ರ ಸರ್ಕಾರವು ಸ್ವಯಂ ನಿವೃತ್ತಿ ಅರ್ಜಿಗೆ ಅನುಮೋದನೆ ನೀಡಿರಲಿಲ್ಲ. ಇದೀಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಮಾಹಿತಿ ನೀಡಿ, ಅಧಿಕಾರ ಹಸ್ತಾಂತರ ಮಾಡಿದ್ದಾರೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ