ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದ ಜೊತೆಗೆ ಇನ್ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ.
ಕೇಂದ್ರ ಮತ್ತು ಸರ್ಕಾರದ ಅನೇಕ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದ್ದು, ನ್ಯಾಯಬೆಲೆ ಅಂಗಡಿಗಳು ಇನ್ಮುಂದೆ ಸಾಮಾನ್ಯ ಸೇವಾ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ.
ಈ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ, ಗೋಧಿ ಜೊತೆಗೆ ಎಲ್ ಪಿಜಿ ಸಿಲಿಂಡರ್, ಪಿಂಚಣಿ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ ಎನ್ನಲಾಗಿದೆ.
ಈ ಯೋಜನೆಯಡಿ ಜನರು ಇನ್ಮುಂದೆ ತಾಲೂಕು, ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವುದಿಲ್ಲ. ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಬ್ಯಾಂಕ್, ಅಂಚೆ ಇಲಾಖೆ, ಹಣಕಾಸು ಸೇವೆಗಳು, ವಿಧವಾ ವೇತನಾ, ಸಂಧ್ಯಾ ಸುರಕ್ಷಾ, ಪಿಂಚಣಿ, ಫೋನ್ ಬಿಲ್. ವಿದ್ಯುತ್ ಬಿಲ್ ಪಾವತಿ, ಪಾನ್ ಕಾರ್ಡ್, ಪಾಸ್ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಬಹುದು. ಶೀಘ್ರವೆ ಈ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.