ಬೆಳಗಾವಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ಕಾಂಗ್ರೆಸ್ ನಾಯಕರು ವಿಭಿನ್ನ ಪ್ರತಿಭಟನೆ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಇಲ್ಲಿನ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ತೈಲ, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ತಲೆ ಮೇಲೆ ಖಾಲಿ ಸಿಲಿಂಡರ್ ಹೊತ್ತು ಪ್ರತಿಭಟನೆಯಲ್ಲಿ ಭಾಗಿಯಾದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಜನ ವಿರೋಧಿ ನೀತಿ ಖಂಡಿಸಿದರು. ಖಾಲಿ ಸಿಲಿಂಡರ್, ಅಡುಗೆ ಎಣ್ಣೆ ಡಬ್ಬಿಗೆ ಹೂಮಾಲೆ ಹಾಕಿದ ಕೈ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Laxmi News 24×7