Breaking News

ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

Spread the love

ಹಾಸನ: ಹಿಂದೂ ದೇವಾಲಯ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್-ಜಟ್ಕಾ ಕಟ್ ವಿವಾದ ಬಳಿಕ, ಇದೀಗ ಮಾವಿನಹಣ್ಣು ಹೋಲ್‍ಸೇಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕೆಂದು ಹಿಂದೂ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ.

ಕೆಲ ದಿನಗಳ ಹಿಂದೆ ಹಿಂದೂ ದೇವಾಲಯ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿತ್ತು. ನಂತರ ಯುಗಾದಿ ಹಬ್ಬದ ಹೊಸತೊಡುಕು ವೇಳೆ ಹಿಂದೂಗಳು ಮುಸಲ್ಮಾನರು ಮಾರುವ ಹಲಾಲ್ ಕಟ್ ಮಾಂಸವನ್ನು ಖರೀದಿಸಬಾರದು. ಬದಲಾಗಿ ಹಿಂದೂಗಳು ಮಾರುವ ಜಟ್ಕಾಕಟ್ ಮಾಂಸವನ್ನು ಕೊಳ್ಳಬೇಕು ಎಂದು ಹಿಂದೂ ಪರ ಸಂಘಟನೆಗಳು ಅಭಿಯಾನ ಆರಂಭಿಸಿದ್ದವು. ಅದರಂತೆ ಜಟ್ಕಾಕಟ್ ಅಭಿಯಾನ ಯಶಸ್ವಿಯಾಗಿತ್ತು.

ಸೋಮವಾರ ಮಸೀದಿಯಲ್ಲಿ ಸೌಂಡ್ ಬ್ಯಾನ್ ಅಭಿಯಾನ ಆರಂಭಿಸಿರುವ ಹಿಂದೂಪರ ಸಂಘಟನೆಗಳು ಇದೀಗ ಹಾಸದಲ್ಲಿ ಮಾವಿನಹಣ್ಣು ಹೋಲ್‍ಸೇಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ಎಂಬ ಪೋಸ್ಟರ್‍ಗಳನ್ನು ವಾಟ್ಸಪ್‍ನಲ್ಲಿ ಶೇರ್ ಮಾಡುವ ಮೂಲಕ ಹಿಂದೂ ಯುವಕರೇ ಮುಂದೆ ಬನ್ನಿ ಎಂಬ ಕರೆ ನೀಡಿ ಹೊಸ ಅಭಿಯಾನವನ್ನು ಆರಂಭಿಸಿದ್ದಾರೆ. ಸದ್ಯ ಈ ಪೋಸ್ಟರ್‍ಗಳು ವೈರಲ್ ಆಗುತ್ತಿದೆ


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ