Breaking News

ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡ

Spread the love

ಬೆಂಗಳೂರು,ಏ.5- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಶತಾಯಗತಾಯ ಸಂಪುಟಕ್ಕೆ ಸೇರ್ಪಡೆಯಾಗಲೇಬೇಕೆಂದು ಪಟ್ಟು ಹಿಡಿದಿರುವ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಲಾಬಿ ಆರಂಭಿಸಿದೆ.

ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡಾಯಿಸಿದ್ದು ತಮ್ಮ ತಮ್ಮ ಗಾಡ್‍ಫಾದರ್‍ಗಳ ಮೂಲಕ ಸಂಪುಟಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ.

ಇದರ ನಡುವೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕಾಏಕಿ ನವದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಕಳೆದ ಹಲವು ದಿನಗಳಿಂದ ವಿಜಯೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಕೇಳಿಬಂದಿದ್ದವು.


Spread the love

About Laxminews 24x7

Check Also

ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

Spread the love ಬೆಂಗಳೂರು: ಮೆಟ್ರೋ  ದರ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಮೆಟ್ರೋ ದರ ಏರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ