Breaking News

ಖಾಸಗಿ ಬಸ್​ಗೆ ವಿದ್ಯುತ್ ತಂತಿ ಸ್ಪರ್ಶ.. ಮೂವರ ಸಾವು, ಎಂಟು ಮಂದಿಗೆ ಗಾಯ!

Spread the love

ಜೈಸಲ್ಮೇರ್(ರಾಜಸ್ಥಾನ): ಜೈಸಲ್ಮೇರ್ ಜಿಲ್ಲೆಯಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ಪೋಳಜಿ ಬಳಿ ಖಾಸಗಿ ಬಸ್ಸೊಂದು ವಿದ್ಯುತ್ ತಂತಿಯ ಸ್ಪರ್ಶಕ್ಕೆ ಒಳಗಾಗಿ, ಮೂವರು ಸಾವನ್ನಪ್ಪಿದ್ದಾರೆ. ಎಂಟು ಪ್ರಯಾಣಿಕರು ಗಂಭೀಯವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, ಬಸ್​​ನ ಮೇಲೂ ಕೆಲವರು ಕುಳಿತು ಪ್ರಯಾಣಿಸುತ್ತಿದ್ದರು. ಜೊತೆಗೆ ಆ ಪ್ರದೇಶದಲ್ಲಿ ರಸ್ತೆ ಕಾಮಗಾರಿ ಕೂಡ ನಡೆಯುತ್ತಿತ್ತು. ವಿದ್ಯುತ್​ ತಂತಿ ಬಸ್​ಗೆ ಸ್ಪರ್ಶಿಸಿದ ಹಿನ್ನೆಲೆ ಮೂವರು ಸಾವನ್ನಪ್ಪಿದ್ದಾರೆ.

ಆಸ್ಪತ್ರೆ ಬಳಿ ಜಮಾಯಿಸಿದ ಪ್ರಯಾಣಿಕರು..ಅಲ್ಲಿನ ಜಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಪ್ರಯಾಣಿಕರು ಬಸ್‌ನಲ್ಲಿದ್ದರು. ಆದ್ರೆ, ವಿದ್ಯುತ್​ ತಂತಿ ಸ್ಪರ್ಶಿಸಿ ಈ ದುರ್ಘಟನೆ ನಡೆದಿದೆ. ಮೃತಪಟ್ಟ ಮೂವರಲ್ಲಿ ಇಬ್ಬರು ಸಹೋದರರಾಗಿದ್ದಾರೆ. ದುರಂತ ಸಂಭವಿಸಿದ ಕೂಡಲೇ ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್​ ವರಿಷ್ಠಾಧಿಕಾರಿ, ಪೊಲೀಸ್​ ಅಧಿಕಾರಿಗಳು ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಹೊರಗೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ