Breaking News

‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’: ಕೋಡಿಮಠದ ಸ್ವಾಮೀಜಿ

Spread the love

ಅರಸೀಕೆರೆ: ‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’ ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಮಠದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅ ವರು, ‘ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗ ಸಮಸ್ಯೆ ಉಂಟಾಗುತ್ತದೆ.

ರಾಜಕೀಯ ವಿಪ್ಲವವಾಗಿ ರಾಜಕೀಯ ಗುಂಪುಗಳು ಸೃಷ್ಟಿಯಾಗುತ್ತವೆ. ಬೆಂಕಿಯ ಅನಾಹುತ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತದೆ’ ಎಂದು ನುಡಿದಿದ್ದಾರೆ.

‘ಭಾರತದಲ್ಲಿ ಈ ಸಂವತ್ಸರದಲ್ಲಿ ಈವರೆಗೂ ಕಂಡು, ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ. ಜಗತ್ತಿನ ಸಾಮ್ರಾಟರು ಎನಿಸಿಕೊಂಡವರು ತಲ್ಲಣಗೊಳ್ಳುತ್ತಾರೆ’ ಎಂದರು.

‘ಈ ಬಾರಿ ಮುಂಗಾರು ಚೆನ್ನಾಗಿ ಆಗುತ್ತದೆ. ಆದರೆ ಹಿಂಗಾರು ಕಡಿಮೆ ಆಗಲಿದೆ. ಎಲ್ಲಕ್ಕಿಂತ ಮುಖ್ಯವಾಗಿ ಮಲೆನಾಡು ಬಯಲಾಗುತ್ತದೆ, ಬಯಲು ಮಲೆನಾಡಾಗುತ್ತದೆ. ನಿರೀಕ್ಷಿತ ಪ್ರದೇಶದಲ್ಲಿ ಮಳೆ ಸರಿಯಾಗಿ ಆಗುವುದಿಲ್ಲ’ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ