Breaking News

ಹುಬ್ಬಳ್ಳಿ : ಜ್ಞಾಪಕಶಕ್ತಿಯಿಂದ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌’ ಮಾಡಿದ 2 ವರ್ಷದ ಬಾಲಕ

Spread the love

ಹುಬ್ಬಳ್ಳಿ : ಈತ ಇನ್ನೂ ಅಮ್ಮನ ಮಡಿಲಲ್ಲಿ ಆಟವಾಡುವ ಪುಟ್ಟ ಕಂದ. ಆದರೆ, ಇವನ ಜ್ಞಾನ ಶಕ್ತಿ ನೋಡಿದ್ರೆ ನಿಜಕ್ಕೂ ಎಂತವರಿಗೂ ಅಚ್ಚರಿ ಆಗುತ್ತದೆ. ತನ್ನದೇ ಆದ ಅಪಾರ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸಾಧನೆ ಮಾಡಿ ತಂದೆ-ತಾಯಿಗೆ ಮಾತ್ರವಲ್ಲದೇ ಇಡೀ ಜಿಲ್ಲೆಗೆ ಹೆಸರು ತಂದಿದ್ದಾನೆ.

ಪಟಾಪಟ್ ಅಂತಾ ಕೇಳಿದ ಪ್ರಶ್ನೆಗೆಲ್ಲ ಉತ್ತರಿಸುವ ತೊದಲು ನುಡಿಯ ಈ ಕಂದನ ಹೆಸರು ಅಥರ್ವ ಎಸ್. ವಾಣಿಜ್ಯನಗರಿ ಹುಬ್ಬಳ್ಳಿಯ ಶಿರೂರ್ ಪಾರ್ಕ್ ನಿವಾಸಿಯಾದ ಪ್ರತಿಭಾ ಹಾಗೂ ಶರಣ್ ಎಂಬ ದಂಪತಿ ಪುತ್ರ. ಅಥರ್ವ್ ತನ್ನ ಅಗಾಧವಾದ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸಾಧನೆ ಮಾಡಿದ್ದಾನೆ.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

Spread the loveಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ