ವಕೀಲರಾದ ಎ.ಹರಿರಾಂ, ಜಗನ್ನಾಥ್‌ರಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚೇತನಾ ವಿರುದ್ಧ ದೂರು ಸಲ್ಲಿಸಲಾಗಿದೆ.
ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕಾಲಂ 4 ಎಸ್ಸಿ ಎಸ್ಟಿ ಒಬಿಸಿ ಕಾಯ್ದೆ 1990 ಅಡಿ ದೂರು ನೀಡಲಾಗಿದೆ. ವಕೀಲ ಎ ಹರಿರಾಂ ಅರ್ಜಿದಾರರಾಗಿದ್ದು, ವಕೀಲರಾದ ಜಗನ್ನಾಥ್, ದಾವಣಗೆರೆಯ ಅನೀಸ್ ಪಾಷ ರಿವಿಜನ್ ಅರ್ಜಿ ಸಲ್ಲಿಸಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ ರೇಣುಕಾಚಾರ್ಯ ರಾಜಕೀಯ ಪ್ರಭಾವ ಬಳಸಿ ಎಸ್ಸಿ ಸರ್ಟಿಫಿಕೇಟ್ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಯಲ್ಲಿ ವಾಸವಿದ್ದರೂ ಬೆಂಗಳೂರಿನಲ್ಲಿ ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆ. ಹೀಗಾಗಿ ಶಾಸಕ ಎಂಪಿ ರೇಣುಕಾಚಾರ್ಯ ಹಾಗೂ ಪುತ್ರಿ ಎಂಆರ್ ಚೇತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿ ದೂರು ದಾಖಲಿಸಲಾಗಿದೆ.
ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕಾಲಂ 4 ಎಸ್ಸಿ ಎಸ್ಟಿ ಒಬಿಸಿ ಕಾಯ್ದೆ 1990 ಅಡಿ ದೂರು ನೀಡಲಾಗಿದೆ.