Breaking News

ಸರ್ಕಾರಿ ಶಾಲೆ ಎದುರು ವಾಮಾಚಾರ ಮಾಡಿರುವ ಕುರಿತು ಗ್ರಾಮಸ್ಥರ ಆತಂಕ

Spread the love

ಬಾಗಲಕೋಟೆ: ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಮಾಚಾರ ಮಾಡಿರುವ ಘಟನೆ ಇಳಕಲ್​ ತಾಲೂಕಿನ ಗೋನಾಳ ಎಸ್​ಬಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಮಕ್ಕಳು, ಗ್ರಾಮಸ್ಥರು ಭಯಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗೇಟ್ ಎದುರು ಎರಡು ಗೊಂಬೆ ಇರಿಸಿ, ಕುಂಕುಮ ಎರಚಿ, ನಿಂಬೆ ಹಣ್ಣುಗಳನ್ನಿಟ್ಟು ವಾಮಾಚಾರ ಮಾಡಲಾಗಿದೆ.

ಈ ಬಗ್ಗೆ ಬೆಳಗಿನ ಜಾವ ಗ್ರಾಮದ ಜನತೆ ನೋಡಿ ಆತಂಕ ವ್ಯಕ್ತಪಡಿಸಿ, ಶಿಕ್ಷಕರು, ಎಸ್​ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತಂದಿದ್ದಾರೆ.ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಿಕ್ಷಕರು ಮತ್ತು ಗ್ರಾಮಸ್ಥರು ಸೇರಿಕೊಂಡು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಶಾಲೆಗೆ ವಾಮಾಚಾರ ಮಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಶಿಕ್ಷಕರ ಮೇಲೆಯೋ ಅಥವಾ ಮಕ್ಕಳ ಮೇಲೆ ಈ ರೀತಿ ವಾಮಾಚಾರ ನಡೆಸಿರಬಹುದೇ ಎಂಬುದರ ಕುರಿತು ಸ್ಥಳೀಯರು ಪ್ರಶ್ನಿಸಿದ್ದಾರೆ. ಇದರಿಂದ ಪಾಲಕರು, ಮಕ್ಕಳನ್ನ ಶಾಲೆಗೆ ಕಳಿಸಲು ಹಿಂದೇಟು ಹಾಕಿದ್ದಾರೆ.


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ