Breaking News

ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ:ಡಿ.ಕೆ. ಶಿ.

Spread the love

ಹಾಸನ: ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಇಡೀ ರಾಜ್ಯದಲ್ಲಿ ಜನ ಬಿಜೆಪಿ ಹಾಗೂ ದಳದಲ್ಲಿ ಗುರುತಿಸಿಕೊಂಡವರು ಕಾಂಗ್ರೆಸ್ ಸದಸ್ಯರಾಗುತ್ತಿದ್ದು, ನಮಗೆ ಆತ್ಮ ವಿಶ್ವಾಸ ಹೆಚ್ಚಿಸಿದೆ. ಪಂಚರಾಜ್ಯ ಚುನಾವಣೆಯಲ್ಲಿ ನಾವು ಪಂಜಾಬ್ ರಾಜ್ಯವನ್ನು ನಮ್ಮ ತಪ್ಪಿನಿಂದ ಸೋತಿದ್ದೇವೆ. ಬಿಜೆಪಿಯವರು ಇಲ್ಲಿಯೂ ಗೆಲ್ಲುವುದಾಗಿ ಬೀಗುತ್ತಿದ್ದಾರೆ. ಆದರೆ ಜನ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. ಚುನಾವಣೆ ಫಲಿತಾಂಶ ನಂತರವೂ 30 ಲಕ್ಷ ಸದಸ್ಯರು ನೋಂದಣಿ ಆಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಅವರೆಲ್ಲ ಸದಸ್ಯರಾಗುತ್ತಿರುವುದು ಸ್ಪಷ್ಟವಾಗಿದೆ.

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ನಾವು ಹೇಳಬೇಕಾಗಿಲ್ಲ. ವಿಶ್ವನಾಥ್, ಕೆಂಪಣ್ಣ ಅವರೆಲ್ಲರೂ ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್, ರಸಗೊಬ್ಬರದ ಬೆಲೆ ಎಲ್ಲವೂ ಏರಿಕೆ ಆಗಿದ್ದು, ಬಿಜೆಪಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಜನ ಅರ್ಥ ಮಾಡಿಕೊಂಡಿದ್ದು, ಚುನಾವಣೆ ಬರಲಿ, ಅವಕಾಶ ಸಿಗಲಿ ಎಂದು ಕಾಯುತ್ತಿದ್ದಾರೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು. ಆದರೆ ರಾಗಿ, ಜೋಳ, ತೊಗರಿ ಸೇರಿದಂತೆ ಬೆಳೆಗಳಿಗೆ ಬೆಂಬಲ ಬೆಲೆ ನೀಡಿಲ್ಲ. ಬದಲಿಗೆ ಸರ್ಕಾರ ಖರೀದಿಗೆ ಮಿತಿ ಏರಿದೆ. ನಮ್ಮ ರಾಜ್ಯದವರೇ ಕೃಷಿ ಸಚಿವರಾಗಿದ್ದರೂ, ಅನ್ಯಾಯ ಮುಂದುವರಿದಿದೆ. ರೈತರು ನೆಮ್ಮದಿಯಾಗಿಲ್ಲ, ಕೈಗಾರಿಕೆಗಳಿಗೆ ಬಂಡವಾಳ ಬರುತ್ತಿಲ್ಲ. ವ್ಯಾಪಾರಸ್ಥರಿಗೂ ತೊಂದರೆ ಆಗಿದೆ. ಪ್ರತಿ ಜಿಲ್ಲೆಯಲ್ಲಿ ಕೋಮುವಾದ ಹರಡುತ್ತಿದ್ದಾರೆ. 


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ