Breaking News

75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!

Spread the love

ಹೊಸದಿಲ್ಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಕಳೆದರೂ ಜಮ್ಮು ಕಾಶ್ಮೀರದ ಹಳ್ಳಿಯೊಂದರಲ್ಲಿ ವಿದ್ಯುತ್ ಸಂಪರ್ಕವಿರಲಿಲ್ಲ. ಇದೀಗ ಈ ಹಳ್ಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ.

ಜಮ್ಮು ಕಾಶ್ಮೀರದ ಉಧಂಪುರದ ಸಡ್ಡಲ್ ಎಂಬ ಹಳ್ಳಿಗೆ ಇದೇ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಕೇಂದ್ರ ಸರ್ಕಾರದ ‘ಯುನೈಟೆಡ್ ಗ್ರಾಂಟ್ಸ್ ಸ್ಕೀಮ್’ ಅಡಿಯಲ್ಲಿ ಸಡ್ಡಲ್ ಹಳ್ಳಿ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಂಡಿದೆ.

ಮೇಣದ ಬತ್ತಿ ಮತ್ತು ಎಣ್ಣೆ ಬುಡ್ಡಿಗಳೇ ಇದುವರೆಗೆ ಸಡ್ಡಲ್ ಹಳ್ಳಿಯ ಜನರ ಬೆಳಕಿನ ಮೂಲವಾಗಿತ್ತು. ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಇದುವರೆಗೆ ಹಲವು ಬಾರಿಗೆ ಮನವಿ ಮಾಡಲಾಗಿದ್ದರೂ ಪ್ರಯೋಜನವಾಗಿರಲಿಲ್ಲ. ಆದರೆ ಬಹುಕಾಲದ ಬೇಡಿಕೆಯೊಂದು ಈಗ ಪೂರ್ಣವಾಗುತ್ತಿರುವ ಬಗ್ಗೆ ಹಳ್ಳಿಯ ಜನರು ಸಂತಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ