ಪಣಜಿ: ಗೋವಾದಲ್ಲಿ ಪೋರ್ಚುಗೀಸರ ಕಾಲದಲ್ಲಿ ಭಗ್ನಗೊಂಡಿರುವ ದೇವಾಲಯಗಳ ಪುನರ್ ನಿರ್ಮಾಣ ಕಾರ್ಯವನ್ನು ಪುರಾತತ್ವ ಇಲಾಖೆಯ ಮೂಲಕ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದೇವಸ್ಥಾನಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‍ನಲ್ಲಿ 20 ಕೋಟಿ ರೂ ಮೀಸಲಿರಿಸಿದೆ.
ಗೋವಾದಲ್ಲಿ ಹಲವೆಡೆ ದೇವಾಲಯಗಳು ಶಿಥಿಲಗೊಂಡ ಮತ್ತು ನಿರ್ಲಕ್ಷಿಸಲ್ಪಟ್ಟ ಸ್ಥಿತಿಯಲ್ಲಿ ಕಂಡುಬಂದಿವೆ.
ಪೋರ್ಚುಗೀಸರ ಆಳ್ವಿಕೆಯಲ್ಲಿ ಈ ಧಾರ್ಮಿಕ ಕೇಂದ್ರಗಳನ್ನು ನಾಶಪಡಿಸುವ ಪ್ರಯತ್ನ ನಡೆದಿದ್ದವು ಎಂದರು.
Laxmi News 24×7