Breaking News

ಬೆಳಗಾವಿ ಆರೆಸ್ಸೆಸ್ ಕಚೇರಿಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ

Spread the love

ಬೆಳಗಾವಿ: ಪ್ರಮೋದ್ ಸಾವಂತ್ ಅವರು ಗೋವಾ ಮುಖ್ಯಮಂತ್ರಿ ಆಗಿ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಬಳಿಕ ಗುರುವಾರ ಬೆಳಗಾವಿಗೆ ಭೇಟಿ ನೀಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿಗೆ ಬಂದು ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿದರು.

ಇಲ್ಲಿಯ ಶಾಸ್ತ್ರಿ ನಗರದ ಆರೆಸ್ಸೆಸ್ ಕಚೇರಿಗೆ ಬಂದು ಕೆಲ ಹೊತ್ತು ಉಳಿದುಕೊಂಡು ಆರೆಸ್ಸೆಸ್ ನ ಪ್ರಮುಖ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.

ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಮೋದ ಸಾವಂತ್ ಬೆಳಗಾವಿಗೆ ಆಗಮಿಸಿದ್ದರು.‌

ಮಾಧ್ಯಮದವರೊಂದಿಗೆ ಮಾತನಾಡಿದ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ , ನಾನು ಯಾವುದೇ ಊರಿಗೆ ಹೋದರೂ ಸಾಮಾನ್ಯವಾಗಿ ಅಲ್ಲಿಯ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡುವುದು ವಾಡಿಕೆ.‌ ಇದನ್ನು ನಾನು ಮೊದಲಿನಿಂದಲೂ ಮುಂದುವರಿಸಿಕೊಂಡು ಬಂದಿದ್ದೇನೆ. ಅದರಂತೆ ಬೆಳಗಾವಿಯ ಕಚೇರಿಗೆ ಬಂದಿದ್ದೇನೆ ಎಂದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ