Breaking News

ಗೋಕಾಕ್​ ಜಿಲ್ಲೆ ಮಾಡಬೇಕು ಜಾರಕಿಹೊಳಿ ಸಹೋದರರ ಜೊತೆಗೂ ಮಾತನಾಡುತ್ತೇವೆ. : ಡಾ.ರಾಜೇಂದ್ರ ಸಣ್ಣಕ್ಕಿ

Spread the love

ಬೆಳಗಾವಿ: ಜಿಲ್ಲಾ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಚರ್ಚೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯನ್ನು ಮೂರು ಜಿಲ್ಲೆಯನ್ನಾಗಿ ವಿಂಗಡಿಸುವ ಬಗ್ಗೆ ಸಚಿವ ಉಮೇಶ್ ಕತ್ತಿ ಒಲವು ತೋರಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆಗಳಾಗಿ ವಿಂಗಡಿಸುವಂತೆ ಕೋರಿ ಉಮೇಶ್ ಕತ್ತಿ ಶೀಘ್ರವೇ ಸಿಎಂ ಭೇಟಿ ಮಾಡಲು ನಿರ್ಧರಿಸಿದ್ದಾರೆ. ಸಚಿವ ಉಮೇಶ್ ಕತ್ತಿಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಸಾಥ್ ನೀಡಿದ್ದಾರೆ. ಇನ್ನೊಂದೆಡೆ ಸಚಿವ ಉಮೇಶ್ ಕತ್ತಿ ಹೇಳಿಕೆ ಗೋಕಾಕ್ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಂಬಂಧ ಜಾರಕಿಹೊಳಿ ಸಹೋದರರ ಆಪ್ತ, ಮಾಜಿ ಜಿ.ಪಂ. ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಪ್ರತಿಕ್ರಿಯೆ ನೀಡಿದ್ದು, ಜೆ.ಹೆಚ್. ಪಟೇಲ್ ಸಿಎಂ ಆಗಿದ್ದಾಗ ಗೋಕಾಕ್, ಚಿಕ್ಕೋಡಿ, ಬೆಳಗಾವಿ ಜಿಲ್ಲೆಯ ವಿಭಜನೆಯ ಗೆಜೆಟ್ ನೋಟಿಫಿಕೇಷನ್ ಆಗಿತ್ತು. ರಾಜಕೀಯ ಕಾರಣಗಳಿಂದ ಅದು ರದ್ದಾಗಿ ಬೆಳಗಾವಿ ಜಿಲ್ಲೆ ವಿಭಜನೆಯಾಗಲಿಲ್ಲ. ಈ ಸಂಬಂಧ ಗೋಕಾಕ್​ ಜನ ಹೋರಾಟ ಮಾಡಿಕೊಂಡೇ ಬಂದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ