ಅಥಣಿ(ಬೆಳಗಾವಿ): ಉಗ್ರಗಾಮಿಗಳು ಎಂದರೆ ದೇಶದ್ರೋಹ ಕೆಲಸ ಮಾಡುವವರು. ಇಂಥವರ ಹೇಳಿಕೆಗೆ ನಮ್ಮ ಸರ್ಕಾರ ಸೊಪ್ಪು ಹಾಕುವುದಿಲ್ಲ ಎಂದು ಅಲ್ ಖೈದಾ ಮುಖ್ಯಸ್ಥ ಅಮನ್ – ಅಲ್ - ಜವಾಹಿರಿ ಹೇಳಿಕೆಯನ್ನು ಮಾಜಿ ಉಪಮುಖ್ಯಮಂತ್ರಿ, ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತೀವ್ರವಾಗಿ ಖಂಡಿಸಿದ್ದಾರೆ.
ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಉಗ್ರಗಾಮಿಗಳು ಅಂದ್ರೆ ದೇಶದ್ರೋಹ ಕೆಲಸ ಮಾಡುವವರು. ಇಂಥವರ ಹೇಳಿಕೆಗೆ ನಮ್ಮ ಸರ್ಕಾರ ಸೊಪ್ಪು ಹಾಕುವುದಿಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುವ ಕಾರ್ಯ ಯಾರೇ ಮಾಡಲಿ, ಸರ್ಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಮುಖ್ಯಮಂತ್ರಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಉಗ್ರಗಾಮಿಗಳ ಹೇಡಿ ಕೃತ್ಯ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.
Laxmi News 24×7