Breaking News

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಿಎಂಟಿಸಿ ಬಸ್​ಗೆ​ ಬೆಂಕಿ; ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡು

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಗದೊಂದು ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ನಗರ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.2014 ರಲ್ಲಿ 186 ಅಶೋಕ್ ಲೇಲ್ಯಾಂಡ್ ಬಸ್​ಗಳನ್ನ ಖರೀದಿ ಮಾಡಲಾಗಿತ್ತು. ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಮಿನಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿದ್ದರು. ಎಂಜಿನಿಯರ್‌ಗಳು ಬಂದು ಎಲ್ಲ ಬಸ್‌ಗಳನ್ನು ತಪಾಸಣೆ ಮಾಡಿ ಸಮಸ್ಯೆ ಬಗಹರಿಸಿದ್ದರು. ಬಳಿಕವೇ ಬಸ್‌ಗಳನ್ನು ಮತ್ತೆ ರೋಡ್‌ಗೆ ಇಳಿಸಲಾಗಿತ್ತು. ಆದರೆ, ಇದೀಗ ಮತ್ತೊಂದು ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಆತಂಕದ ಮನೆ ಮಾಡಿದೆ.


Spread the love

About Laxminews 24x7

Check Also

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

Spread the love ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ