Breaking News

ಆರ್​ಎಸ್​ಎಸ್​, ಬಿಜೆಪಿ ವಿರುದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ವಾಗ್ದಾಳಿ

Spread the love

ಬೆಳಗಾವಿ : ನಮ್ಮದು ಈಗಾಗಲೇ ಹಿಂದೂ ರಾಷ್ಟ್ರವಿದೆ. ಹೀಗಾಗಿ, ಆರ್‌ಎಸ್‌ಎಸ್​ನ ಹಿಂದೂ ರಾಷ್ಟ್ರವನ್ನು ನಾವು ಒಪ್ಪಲ್ಲ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮೊದಲು ನಮ್ಮ ದೇಶದ ಮೇಲೆ ಬ್ರಿಟಿಷರು ಸೇರಿ ಹಲವರು ದಾಳಿ ಮಾಡಿದ್ದರು. ಆದರೂ ದೇಶಕ್ಕೆ ಏನೂ ಆಗಲಿಲ್ಲ. ಹಿಂದೂ ಧರ್ಮವನ್ನು ಯಾರಿಂದಲೂ ಟಚ್ ಮಾಡಲು ಆಗಲ್ಲ. ಅಂದು ಹಿಂದೂ ಧರ್ಮ ಇತ್ತು. ಇಂದು ಸಹ ಹಾಗೆಯೇ ಇದೆ. ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ ಎಂದರು.

ವೋಟ್ ಬ್ಯಾಂಕ್ : ಬಿಜೆಪಿ ಕೇವಲ ವೋಟ್ ಬ್ಯಾಂಕ್​ಗಾಗಿ ಧರ್ಮ, ಜಾತಿ ಆಧಾರದ ಮೇಲೆ ರಾಜಕೀಯ ಮಾಡುತ್ತಿದೆ. ನಮ್ಮದು ಹಿಂದೂ ರಾಷ್ಟ್ರ. ಶಿವಾಜಿ ಮಹಾರಾಜರು ಹಿಂದವೀ ಸ್ವರಾಜ್ ಮಾಡಿದ್ದಾರೆ. ಈಗ್ಯಾವ ಹೊಸ ಹಿಂದೂ ರಾಷ್ಟ್ರ ಮಾಡಲು ಇವರು ಹೊರಟ್ಟಿದ್ದಾರೆ. ಆರ್​ಎಸ್​ಎಸ್​ನ ಹಿಂದೂ ರಾಷ್ಟ್ರವನ್ನು ನಾವು ಒಪ್ಪಲ್ಲ. ಹಿಂದೂ ಧರ್ಮದ ಬಗ್ಗೆ ಮೊದಲು ಆರ್​ಎಸ್​ಎಸ್ ತಿಳಿದುಕೊಳ್ಳಬೇಕು. ಹಿಂದೂ ಧರ್ಮಕ್ಕೆ ಎಲ್ಲರೂ ಒಳಪಡುತ್ತಾರೆ. ಹಿಂದೂ ಧರ್ಮದ ಸಂಸ್ಕೃತಿ ಬಹಳ ದೊಡ್ಡದಿದೆ ಎಂದರು.

ಆರಗ ಜ್ಞಾನೇಂದ್ರರು ಆರ್‌ಎಸ್‌ಎಸ್ ಏಜೆಂಟ್ : ಗೃಹ ಸಚಿವ ಆರಗ ಜ್ಞಾನೇಂದ್ರ ಆರ್​ಎಸ್​ಎಸ್ ಎಜೆಂಟ್​ರಂತೆ ವರ್ತಿಸುತ್ತಿದ್ದಾರೆ. ಬೆಂಗಳೂರು ದಲಿತ ಯುವಕ ಚಂದ್ರು ಸಾವು ಪ್ರಕರಣದ ಕುರಿತು ಆರಗ ಜ್ಞಾನೇಂದ್ರ ಅವರು ನೀಡಿರುವ ಹೇಳಿಕೆ ಖಂಡನೀಯ. ಘಟನೆಯ ಬಗ್ಗೆ ಬೆಳಗ್ಗೆ ಬೆಂಗಳೂರು ಕಮಿಷನರ್ ಟ್ವೀಟ್ ಮಾಡಿದ್ದರು. ಹೀಗಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ ಕದಡಲು ಗೃಹ ಸಚಿವರು ಯತ್ನಿಸುತ್ತಿದ್ದಾರೆ. ಹಾಗಾಗಿ, ಅವರ ವಿರುದ್ಧ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ