Breaking News

ಕಿಸಾನ್ ಸಮ್ಮಾನ್: ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

Spread the love

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಮೇ 22 ರವರೆಗೆ ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ.

 

ಇದುವರೆಗೆ ಕಿಸಾನ್ ಸಮ್ಮಾನ್ ಪೋರ್ಟಲ್ ಮೂಲಕ ನಡೆಸಲಾಗುತ್ತಿದ್ದ ಇ -ಕೆವೈಸಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ರೈತರು ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ತೆರಳಿ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇ-ಕೆವೈಸಿ ಮಾಡಿಸದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣ ವರ್ಗಾವಣೆಯಾಗುವುದಿಲ್ಲ.

ಆಧಾರ್ ಓಟಿಪಿ ಮೂಲಕ ಇ -ಕೆವೈಸಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಯೋಮೆಟ್ರಿಕ್ ವಿವರ ನೀಡಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ