ಬೆಳಗಾವಿ: ಬಿಜೆಪಿ (BJP), ಆರ್‍ಎಸ್‍ಎಸ್ (RSS) ನವರು ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದ್ದು, ಹಿಂದುಳಿದವರಿಗೆ ಮೀಸಲಾತಿ ರದ್ದುಪಡಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ (B.K Hariprasad) ಹೇಳಿದರು
ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ರಾಷ್ಟ್ರವನ್ನು ಸ್ಥಾಪನೆ ಮಾಡಿದವರಿಗೂ ಅಪಮಾನ ಮಾಡುವಂತ ಘಟನೆ ನಡೀತಿದೆ. ಸ್ವಾತಂತ್ರ್ಯ ಹೋರಾಟ ಕೇವಲ ಒಂದು ಜಾತಿ, ಭಾಷೆ, ಪ್ರಾಂತ್ಯದ ವಿಚಾರ ಆಗಿರಲಿಲ್ಲ. ಲಕ್ಷಾಂತರ ಜನ ತ್ಯಾಗ ಬಲಿದಾನ ಮಾಡಿ ಸ್ವಾತಂತ್ರ್ಯ ಪಡೆದಿರುವಂತಹದ್ದು. ಸಂವಿಧಾನ ವಿರುದ್ಧ ಬಿಜೆಪಿ, ಮಂತ್ರಿಗಳು ಹಾಗೂ ಸಂಘಪರಿವಾರ ಸದಸ್ಯರು ಷಡ್ಯಂತ್ರ ಮಾಡೋದನ್ನ ನೋಡ್ತಿದ್ದೇವೆ ಎಂದರು.
ದೇಶದಲ್ಲಿ ಮೊಟ್ಟಮೊದಲಿನ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ಬಹದೂರ್ ಎಸ್ ಜಾಫರ್’ ವಹಿಸಿದ್ದರು. ಇದನ್ನು ಯಾರೂ ಸಹ ಮರೆಯಕ್ಕಾಗೋದಿಲ್ಲ. ತದನಂತರ 1857ರಲ್ಲಿ ಝಾನ್ಸಿ ರಾಣಿ ಯಾವುದೇ ಧರ್ಮ, ಜಾತಿ, ಭಾಷೆ, ಪ್ರಾಂತ್ಯ ಲೆಕ್ಕಿಸದೇ ಸ್ವಾತಂತ್ರ್ಯ ಹೋರಾಟ ಮಾಡಿದ್ರು. ಏನೂ ನಿರೀಕ್ಷೆ ಇಲ್ಲದೇ ಈ ಭಾರತ ದೇಶವನ್ನ ನಮ್ಮ ಕೈಗೆ ಕೊಟ್ಟಿದ್ದಾರೆ. ಭಾರತ ದೇಶ ಉಳಿಸುವ ಕೆಲಸ ನಾವೆಲ್ಲ ಮಾಡಬೇಕಿದೆ. ಏನಾದರೂ ಒಳ್ಳೆಯ ಕೆಲಸ ಮಾಡೋಣ.