ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಇಂತಹ ಭೀಕರ ಅಪಘಾತ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿದೆ.
ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಕಟ್ಟಿಗೇನಗಹಳ್ಳಿ ಗೇಟ್ ಬಳಿ ರಸ್ತೆಬದಿ ಲಾರಿಯೊಂದು ನಿಂತಿತ್ತು. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Laxmi News 24×7