ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅಧಿಕಾರ ಕಳೆದುಕೊಳ್ಳಲು ಸೇನೆಯೇ ಮುಖ್ಯ ಕಾರಣ ಎಂದು ಅಲ್ಲಿನ ಜನರು ನಂಬಿದ್ದಾರೆ.ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾನುವಾರ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನರು ‘ಚೌಕಿದಾರ್ ಚೋರ್ ಹೇ’ ಘೋಷಣೆ ಮೊಳಗಿಸಿ ಸೇನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಘೋಷಣೆಯನ್ನು ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಳಕೆ ಮಾಡಿದ್ದರು. ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅಧಿಕಾರ ಕಳೆದುಕೊಳ್ಳಲು ಸೇನೆಯೇ ಮುಖ್ಯ ಕಾರಣ ಎಂದು ಅಲ್ಲಿನ ಜನರು ನಂಬಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲಾಲ್ ಹವೇಲಿಯಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನಜಂಗುಳಿಯು ಪಾಕಿಸ್ತಾನದ ಸೇನೆಯನ್ನು ಚೌಕಿದಾರ (ದ್ವಾರಪಾಲಕ) ಎಂದು ಹೋಲಿಸಿ, ಅವನು ಚೋರ್ (ಕಳ್ಳ) ಎಂದು ಆರೋಪಿಸಿತು. ಸಮಾವೇಶದಲ್ಲಿ ಮಾತನಾಡಿದ ಪಾಕಿಸ್ತಾನದ ಅಂತರಿಕ ವ್ಯವಹಾರಗಳ ಇಲಾಖೆಯ ಮಾಜಿ ಸಚಿವ ಶೇಖ್ ರಶೀದ್, ‘ಸಶಸ್ತ್ರ ಪಡೆಗಳ ವಿರುದ್ಧ ಘೋಷಣೆ ಕೂಗಬೇಡಿ’ ಎಂದು ವಿನಂತಿಸಿದರು. ‘ಘೋಷಣೆ ಕೂಗಬೇಡಿ, ನಾವು ಶಾಂತಿಯುತವಾಗಿ ಹೋರಾಡೋಣ’ ಎಂದು ಮನವಿ ಮಾಡಿದರು.
Never have such crowds come out so spontaneously and in such numbers in our history, rejecting the imported govt led by crooks. pic.twitter.com/YWrvD1u8MM
— Imran Khan (@ImranKhanPTI) April 10, 2022