ಬೆಂಗಳೂರು : ‘ಹಿಂದೂ ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಬಾಳಬೇಕೆಂಬುದು ನಮ್ಮ ಅಪೇಕ್ಷೆ, ಅದನ್ನು ಹಾಳು ಮಾಡುವ ಕೆಲಸ ಮಾಡಬೇಡಿ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ನಾವೆಲ್ಲಒಟ್ಟಾಗಿ ಬಾಳಬೇಕು.
ಯಾರೋ ಕಿಡಿಗೇಡಿಗಳು ಸಾಮರಸ್ಯಕ್ಕೆ ಅಡ್ಡಿ ಮಾಡಿದರೆ, ಅಹಿತಕರ ಘಟನೆಗಳಿಗೆ ಕಾರಣವಾದರೆ ಸರಕಾರ ಸಹಿಸುವುದಿಲ್ಲ,ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ” ಎಂದರು.