ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಮೃತದೇಹ ಉಡುಪಿಯ ಹೋಟೆಲ್ ಒಂದರಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಟಿ ನಡೆಸಿದರು.
ಈ ಹಿನ್ನೆಲೆಯಲ್ಲಿ ಸರ್ಕಾರ ಈಶ್ವರಪ್ಪ ವಿರುದ್ಧ ಸೆಕ್ಷನ್ 302 ಅಡಿಯಲ್ಲಿ ಕೇಸ್ ದಾಖಲಿಸಿಕೊಳ್ಳಬೇಕು. ಈ ಕೂಡಲೇ ಈಶ್ವರಪ್ಪರನ್ನ ಬಂಧಿಸಬೇಕು. ಅಲ್ಲದೇ ಬೊಮ್ಮಾಯಿ ಅವರು ಕ್ಯಾಬಿನೆಟ್ನಿಂದ ವಜಾ ಮಾಡಬೇಕು. ಯಾಕಂದ್ರೆ ಈಶ್ವರಪ್ಪ ಅವರೇ ನನ್ನ ಸಾವಿಗೆ ಹೊಣೆ ಎಂದು ಅವರು ಮೆಸೇಜ್ ಕಳುಹಿಸಿದ್ದಾರೆ. ಇಲ್ಲಿ ಈಶ್ವರಪ್ಪರ ಅಭಿಪ್ರಾಯ ಏನು ಅನ್ನೋ ಮಹತ್ವ ಅಲ್ಲ, ಸಂತೋಷ್ ಪಾಟೀಲ್ ಡೆತ್ ನೋಟ್ ಇಂಪಾರ್ಟೆಂಟ್ ಎಂದು ಗುಡುಗಿದ್ದಾರೆ.
Laxmi News 24×7