Breaking News

ನನ್ನ ಮೇಲೆ ಆಪಾದನೆ ಮಾಡಿದವ್ರು ಕೋರ್ಟ್‌ನಲ್ಲೇ ಪ್ರೂವ್‌ ಮಾಡ್ಬೇಕಿತ್ತು.. ಆತ್ಮಹತ್ಯೆಗೂ ನನ್ಗೂ ಸಂಬಂಧ ಇಲ್ಲ.. ಈಶ್ವರಪ್ಪ

Spread the love

ಮೈಸೂರು : ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ ಎಂದು ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರಪ್ಪ ಅವರು, ತಮ್ಮ ಇಲಾಖೆಯ ಮೇಲೆ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ. ಈತ ನಮ್ಮ ಇಲಾಖೆಯ ಮೇಲೆ ಆರೋಪ ಮಾಡಿರುವ ವಿಚಾರದಲ್ಲಿ ನಾನು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇನೆ ಎಂದರು.

ಸಂತೋಷ ಹಾಗೂ ಒಂದು ಖಾಸಗಿ ಚಾನಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ, ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ ಎಂದರು. ಕಾಂಗ್ರೆಸ್ ರಾಜೀನಾಮೆ ನೀಡುವಂತೆ ಆಗ್ರಹಿಸಿದೆ. ನಾನು ರಾಜೀನಾಮೆ ನೀಡುವುದಿಲ್ಲ. ತನಿಖೆ ನಡೆಯಲಿ ಎಂದು ಮೈಸೂರಿನಲ್ಲಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ