ಸಂತೋಷ್ ಪಾಟೀಲ್ ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ. ಕಳೆದ ತಿಂಗಳಷ್ಟೇ, ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ಗೆ ಪತ್ರ ಬರೆದಿದ್ದು.
ಬೆಳಗಾವಿಯ ಹಿಂಡಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಿಂದ ತಾವು ಮತ್ತು ಇತರ ಗುತ್ತಿಗೆದಾರರು ರಸ್ತೆ ಕಾಮಗಾರಿ ಸೇರಿ ಒಟ್ಟು 108 ಕಾಮಗಾರಿಗಳನ್ನ ಪೂರ್ಣಗೊಳಿಸಿದ್ದೀವಿ. ಇದಕ್ಕಾಗಿ 4 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಸಾಲ ಸೋಲ ಮಾಡಿ ಈ ದುಡ್ಡು ಒಟ್ಟು ಮಾಡಲಾಗಿದೆ. ಆರಂಭದಲ್ಲಿ ಈ ಕಾಮಗಾರಿಗಳಿಗೆ ಅನುದಾನ ಕೊಡೋದಾಗಿ ಸಚಿವ ಈಶ್ವರಪ್ಪನವರು ಹೇಳಿದ್ದರು. ಆದ್ರೀಗ ಅವರ ಸಹಚರರು 40 ಪರ್ಸೆಂಟ್ ಕಮಿಷನ್ಗೆ ಬೇಡಿಕೆ ಇಟ್ಟಿದ್ದಾರೆ. ಕಿರುಕುಳು ನೀಡ್ತಿದ್ದಾರೆ ಅಂತ ಆರೋಪಿಸಿ ಪ್ರಧಾನಿಗೆ ಪತ್ರೆ ಬರೆದಿದ್ದರು.
ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದ ಕೆಲವೇ ದಿನಗಳಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರೋದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಂತೋಷ್ ಸಾವಿನ ಹಿಂದೆ ಈಶ್ವರಪ್ಪ ಕೈವಾಡ ಇದೆ ಅಂತ ವಿಪಕ್ಷಗಳು ಆರೋಪಿಸಿವೆ. ಅಲ್ಲದೆ ಈಶ್ವರಪ್ಪ ರಾಜೀನಾಮೆ ಕೊಡ್ಬೇಕು ಅಂತ ಆಗ್ರಹಿಸಿವೆ. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ರೋಡಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಮತ್ತು ಶಿವಮೊಗ್ಗದಲ್ಲಿರೋ ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಈಶ್ವರಪ್ಪ ಮನೆಗೆ ಬಿಗಿ ಭದ್ರತೆ ನೀಡಲಾಗಿದೆ.
Laxmi News 24×7