ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕ, ಬೆಳಗಾವಿ ಇವರ ಆಶ್ರಯಲ್ಲಿ ವೀರಶೈವ ಲಿಂಗಾಯತ ಬಡ ವಿದ್ಯಾರ್ಥಿನಿಯರಿಗಾಗಿ ಉಚಿತ ವಸತಿ ನಿಲಯ ಇದರ ಅಡಿಗಲ್ಲು ಸಮಾರಂಭದಲ್ಲಿ ಭಾಗಿಯಾದೆ.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರಿಂದ ಶಂಕುಸ್ಥಾಪನೆ ನೆರವೇರಿಸಿಲಾಯಿತು ಹಾಗೂ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ ಇವರು ವಹಿಸಿದ್ದರು.
ಈ ಸಂದರ್ಭದಲ್ಲಿ ಕೆ.ಎಲ್. ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಸಂಸದರಾದ ಶ್ರೀಮತಿ ಮಂಗಲಾ ಅಂಗಡಿ, ವಿಧಾನ ಪರಿಷತ್ ಸದಸ್ಯರಾದ Channaraj Hattiholi , ಶ್ರೀಮತಿ ರತ್ನಪ್ರಭಾ ಬೆಲ್ಲದ, ಡಾ. ಗುರುದೇವಿ ಹುಲೆಪ್ಪನವರಮಠ, ಶ್ರೀಮತಿ ಮಂಗಲಾ ಮೆಟಗುಡ್ಡ, ಜ್ಯೋತಿ ಭಾವಿಕಟ್ಟಿ, ರಮೇಶ ಕಳಸನ್ನವರ ಹಾಗೂ ಮುಂತಾದವರು ಉಪಸ್ಥಿತರಿದ್ದರು.