Breaking News

ತಸ್ಥೀಕ್‌ ಮೊತ್ತ 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ಆದೇಶ

Spread the love

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸಿ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ 48 ಸಾವಿರ ರೂಪಾಯಿಗಳ ತಸ್ಥೀಕ್‌ ಹಣವನ್ನು 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ತಸ್ಥೀಕ್‌ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಹಲವಾರು ಮನವಿಗಳನ್ನು ಸಲ್ಲಿಸಿದ್ದರು.

ದಿನ ಬಳಕೆಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಿರುವ ಹಿನ್ನಲೆಯಲ್ಲಿ ಪೂಜಾ ಕೈಂಕರ್ಯಗಳ ನಿರ್ವಹಣೆಗಾಗಿ ತಸ್ಥೀಕ್‌ ಮೊತ್ತವನ್ನು ಹೆಚ್ಚಿಸುವ ಭರವಸೆಯನ್ನು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ.ಜೊಲ್ಲೆ ನೀಡಿದ್ದರು. ಮಾನ್ಯ ಸಚಿವರ ಒತ್ತಾಸೆಯಂತೆ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಈ ಹೆಚ್ಚಳದ ಬಗ್ಗೆ ಏಪ್ರಿಲ್‌ 11, 200 ರಂದು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಈ ಆರ್ಥಿಕ ವರ್ಷದಿಂದಲೇ ಹೆಚ್ಚಳ ಅನ್ವಯವಾಗಲಿದೆ.


Spread the love

About Laxminews 24x7

Check Also

ಕಾರವಾರ ಕರಾವಳಿ ಉತ್ಸವದಲ್ಲಿ ಮಾನವೀಯತೆ ಮೆರುಗು: ಗಣ್ಯರಿಗಲ್ಲ, ವಿಶೇಷಚೇತನ ಮಕ್ಕಳಿಗೆ ಸಿಕ್ಕಿತು ‘ಹಾರುವ’ ಭಾಗ್ಯ!

Spread the loveಕಾರವಾರ: ಏಳು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅರಬ್ಬಿ ಸಮುದ್ರತೀರದಲ್ಲಿ ನಡೆಯುತ್ತಿರುವ ‘ಕರಾವಳಿ ಉತ್ಸವ’ವು ಈ ಬಾರಿ ಕೇವಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ