ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯ ಕೆನ್ನಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಿರೆಕೇರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಏ.8ರಂದು ಹಿಂದಿ ವಿಷಯದ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ ಎಸ್.
ಐರಣಿ ಎಂಬಾತ ಹೆಚ್ಚಿನ ಅಂಕ ಕೊಡಿಸುವ ಆಮಿಷವೊಡ್ಡಿ,. ಪರೀಕ್ಷಾ ಕೇಂದ್ರದ ಕಟ್ಟಡದ ಮೇಲೆ ಕರೆದುಕೊಂಡು ಹೋಗಿ, ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟು ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ ಅಂತ ವಿದ್ಯಾರ್ಥಿನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ, ಸಂತ್ರಸ್ತೆಯ ಸಹೋದರ ಹಿರೇಕೆರೂರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.