Breaking News

ನಿಮಗೇನಾದರೂ ಮಾನ ಮರ್ಯಾದೆ ಇದ್ದರೆ ಕೂಡಲೇ ಈಶ್ವರಪ್ಪ ಅರೆಸ್ಟ್ ಮಾಡಿ: ಮಾಜಿ ಸಿಎಂ ಸಿದ್ಧರಾಮಯ್ಯ

Spread the love

ಗುತ್ತಿಗೆದಾರ ಸಂತೋಷ್ ಪಾಟೀಲ್ ನನ್ನ ಸಾವಿಗೆ, ಈಶ್ವರಪ್ಪ ನೇರ ಕಾರಣ ಅಂತ ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿವೆನ್ಶನ್ ಆಫ್ ಕರಪ್ಶನ್ ಆಕ್ಟ್ ಸೆಕ್ಷನ್ 30 ಅಡಿಯಲ್ಲಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಬೇಕು. ಕಾನೂನು ಎಲ್ಲರಿಗೂ ಒಂದೇ.

ಅದು ಸಿಎಂ ಆಗಿರಲಿ, ಸಚಿವರಾಗಿರಲಿ ಎಲ್ಲರಿಗೂ ಕಾನೂನು ಒಂದೇ. ಇದು ಬಹಳ ಸೀರಿಯಸ್ ಅಫೆನ್ಸ್ ಆದ್ದರಿಂದ ಕೂಡಲೇ ಈಶ್ವರಪ್ಪನವರ ಅರೆಸ್ಟ್ ಮಾಡಿ ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇವತ್ತು ನಾನು ಹಾಗೂ ನಮ್ಮ ಅಧ್ಯಕ್ಷರು, ಮೇಲ್ಮನೆ ವಿಪಕ್ಷ ನಾಯಕ ಹರಿಪ್ರಸಾದ್ ಎಲ್ರೂ ಸೇರಿ ಗವರ್ನರ್ ಭೇಟಿ ಮಾಡಿದ್ದೇವೆ. ರಾಜ್ಯಪಾಲರಿಗೆ ಮನವಿ ಕೊಟ್ಟಿದ್ದೇವೆ. ಗವರ್ನರ್ ಅಥವಾ ಸಿಎಂ ಕೂಡಲೇ ಈಶ್ವರಪ್ಪ ವಜಾ ಮಾಡಬೇಕು.

ನಾವು ಗವರ್ನರ್ ಗೆ ಕೇಸ್ ದಾಖಲಿಸಲು ಡೈರೆಕ್ಷನ್ ಕೊಡಲು ಮನವಿ ಮಾಡಿದ್ದೇವೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಈಶ್ವರಪ್ಪ ಅರೆಸ್ಟ್ ಮಾಡಿ. ರಾಜೀನಾಮೆ ಕೊಡದಿದ್ದರೆ ನಾವು ಜನತಾ ನ್ಯಾಯಾಲಯಕ್ಕೆ ಹೋಗ್ತೇವೆ. ಡೆಡ್ ಬಾಡಿ ಬಂದ ಮೇಲೆ ಬೆಳಗಾವಿಗೆ ಹೋಗ್ತೀವಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ