ಬೆಳಗಾವಿ: ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ. ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ನೀಡಬಾರದು. ತನಿಖೆಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ್ರೆ ರಾಜೀನಾಮೆ ನೀಡಲಿ. ಅಲ್ಲಿಯವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಸಂತೋಷ್ ಪ್ರಕರಣದ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸುತ್ತೇನೆ. ಹೈಕಮಾಂಡ್ ಅನುಮತಿ ಪಡೆದು ಸುದ್ದಿಗೋಷ್ಠಿ ನಡೆಸುತ್ತೇನೆ. ಸುದ್ದಿಗೋಷ್ಠಿ ನಡೆಸಿ ಷಡ್ಯಂತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವೆ. ಸಿಡಿ ಕೇಸ್, ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಲಿ. ಎರಡೂ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಯಲಿ. ನಾನು ಕಾಂಗ್ರೆಸ್‌ನಲ್ಲಿದ್ದಾಗಲೂ ಸಂತೋಷ್ ನನ್ನ ಜತೆಯಲ್ಲಿದ್ರು ಎಂದು ಸಂತೋಷ್ ಮನೆಗೆ ಭೇಟಿ ಬಳಿಕ ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ
ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಪರೋಕ್ಷ ಆರೋಪ ಮಾಡಿದ್ದಾರೆ. ಸಂತೋಷ್ ಸಾವಿನ ಹಿಂದೆ ಡಿಕೆಶಿ ಕೈವಾಡದ ಬಗ್ಗೆ ಆರೋಪ ಮಾಡಿದ್ದಾರೆ. ಹೆಸರು ಹೇಳದೇ ‘ಮಹಾನ್ ನಾಯಕ’ನೆಂದು ಹೇಳಿ ಆರೋಪ ಮಾಡಿದ್ದಾರೆ. ನನ್ನ ಸಿಡಿ ತಯಾರಿಸಿದ ‘ಮಹಾನ್ ನಾಯಕ’ನೇ ಇದರಲ್ಲೂ ಭಾಗಿ. ಸಂತೋಷ್ ಕೇಸ್‌ನಲ್ಲೂ ‘ಮಹಾನ್ ನಾಯಕ’ ಭಾಗಿಯಾಗಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.