Breaking News

17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿರುವ ಸಿ.ಎಂ.ಇಬ್ರಾಹಿಂಗೆ ರಾಜ್ಯಾಧ್ಯಕ್ಷ ಪಟ್ಟ

Spread the love

ಬೆಂಗಳೂರು,ಏ.14- ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ.

ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ.

ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.

ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ ರಾಜ್ಯಾಧ್ಯಕ್ಷರಾಗಿ ಅಕಾರ ಸ್ವೀಕರಿಸುವ ಸಾಧ್ಯತೆಗಳಿವೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಉದ್ದೇಶಿಸಲಾಗಿದೆ.


Spread the love

About Laxminews 24x7

Check Also

ದಸರಾ ಮಹೋತ್ಸವದ ಮುನ್ನುಡಿಯ ಸಡಗರಕ್ಕೆ ಸಿದ್ಧತೆ

Spread the loveಮೈಸೂರು : ದಸರಾ ಮಹೋತ್ಸವಕ್ಕೂ ಮುನ್ನ ನಡೆಯುವ ‘ಯುವ ಸಂಭ್ರಮ’ದ ಸಾಂಸ್ಕೃತಿಕ ರಂಗು ಸೆ.10 ರಿಂದ 17ರ ವರೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ