ಹೈಕಮಾಂಡ್ ಎಂತೆಂತವರನ್ನೆ ಮನೆಯಲ್ಲಿ ಕೂಡಿಸಿದೆ. ಇನ್ನು ವಿಜಯೇಂದ್ರ ಯಾವ ಗಿಡದ ತಪ್ಪಲು..? ನನ್ನಿಂದಲೇ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ. ವಿಜಯೇಂದ್ರ ಮೊನ್ನೆ ಮೊನ್ನೆ ನಮ್ಮ ಮುಂದೆಯೇ ಹುಟ್ಟಿದ ಹುಡುಗ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮಾಜಿ ಮೂರ್ತಿ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾಧ್ಯಮಗಳು ತಾವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಯತ್ನಾಳ್ ಹೈಕಮಾಂಡ್ ಎಂತಿಂಥವರನ್ನು ಮನೆಯಲ್ಲಿ ಕೂಡಿಸಿದೆ. ಇನ್ನು ವಿಜಯೇಂದ್ರ ಯಾವ ಗಿಡದ ತಪ್ಪಲು? ನನ್ನಿಂದಲೇ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ. ವಿಜಯೇಂದ್ರ ಮೊನ್ನೆ ಮೊನ್ನೆ ನಮ್ಮ ಮುಂದೆಯೇ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ನು ಮುಂದೆ ವಂಶಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಪ್ರಧಾನಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೇಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು ಎಂದು ವ್ಯಂಗ್ಯವಾಡಿದರು.