ಶಿವಮೊಗ್ಗ: ‘ನನಗೆ ಇದು ಅಗ್ನಿ ಪರೀಕ್ಷೆ. ಈ ಅಗ್ನಿ ಪರೀಕ್ಷೆಯಲ್ಲಿ ನಾನು ಗೆದ್ದು ಬರುವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗ ನಗರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಕಣ್ಣೀರು ಹಾಕಿ, ನೀವು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದಾಗ ಈಶ್ವರಪ್ಪ ಸಮಾಧಾನಪಡಿಸಿದರು.
ನನ್ನ ಬಗ್ಗೆ ತಿಳಿದಿರುವ ಎಲ್ಲರೂ ಸಹ ನನಗೆ ವಿಶ್ವಾಸ ತುಂಬುತ್ತಿದ್ದಾರೆ. ನೀವು ಗೆದ್ದು ಬರುತ್ತೀರಿ ಎನ್ನುತ್ತಿದ್ದಾರೆ. ನಾನು ಹೀಗೆ ನನಗೆ ಅಗ್ನಿಪರೀಕ್ಷೆ ಬರುತ್ತದೆ ಎಂದು ತಿಳಿದುಕೊಂಡಿರಲಿಲ್ಲ. ಆದರೆ, ಜನರೇ ಬಂದು ನನ್ನನ್ನು ಮಾತನಾಡಿಸುತ್ತಿರುವುದು ಧೈರ್ಯ ತಂದಿದೆ’ ಎಂದು ಅವರು ಹೇಳಿದರು.