Breaking News

ಆಹೋರಾತ್ರಿ ಧರಣಿ ಮುಗಿಸುತ್ತಿದ್ದೇವೆ, ಸರ್ಕಾರದ ವಿರುದ್ಧದ ಹೋರಾಟ ನಿಲ್ಲಲ್ಲ: ಸಿದ್ದರಾಮಯ್ಯ

Spread the love

ಬೆಂಗಳೂರು : ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಧರಣಿಯನ್ನು ಮುಕ್ತಾಯಗೊಳಿಸಿದ್ದು, ಸರ್ಕಾರದ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ 24 ಗಂಟೆಗಳ ಧರಣಿ ಮುಕ್ತಾಯಕ್ಕೂ ಮುನ್ನ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಳೆಯಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆಂದರು.

ಮನವಿ ಪತ್ರವನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿಗೆ ನೀಡುತ್ತೇವೆ. ಸರ್ಕಾರ ನಿಯೋಜಿಸುವ ಯಾವುದೇ ವಿಧದ ಅನೇಕ ಸಂಸ್ಥೆಗಳಿಂದ ಪ್ರಾಮಾಣಿಕ ತನಿಖೆ ನಡೆಯುವ ವಿಶ್ವಾಸವಿಲ್ಲ. ನಿಷ್ಪಕ್ಷಪಾತ ತನಿಖೆಯನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ತಂಡದಿಂದ ನಡೆಸಲು ಒತ್ತಾಯಿಸುತ್ತೇವೆಂದರು.

ಈಶ್ವರಪ್ಪ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಇದು ರಾಜಕೀಯಕ್ಕೋಸ್ಕರವಲ್ಲ. ಸಂತೋಷ್ ಕುಟುಂಬಕ್ಕೆ ನ್ಯಾಯ, ಪರಿಹಾರ ಸಿಗಬೇಕು. ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತ ಮಾಡುವುದೇ ನಮ್ಮ ಉದ್ದೇಶವೆಂದರು. ನಿನ್ನೆ ನಾವು ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡು ಸಿಎಂ ನಿವಾಸಕ್ಕೆ ಮುತ್ತಿಗೆಗೆ ಮುಂದಾಗಿದ್ದೆವು.


Spread the love

About Laxminews 24x7

Check Also

ಕದ್ರಿ ಪಾರ್ಕ್​ಗೆ ಟೋಲ್ ಮಾದರಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ: 5 ನಿಮಿಷಕ್ಕಿಂತ ಹೆಚ್ಚು ನಿಂತರೆ ಶುಲ್ಕ ಕಟ್

Spread the loveಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಗಳೂರಿನ ಕದ್ರಿ ಪಾರ್ಕ್ ರಸ್ತೆ ಅಭಿವೃದ್ಧಿಗೊಂಡಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ