Breaking News

ಒಂದಲ್ಲ, ಎರಡಲ್ಲ ಬರೋಬ್ಬರಿಗೆ 12 ಸೀರಿಯಲ್ ನಟಿಯರಿಗೆ ಡ್ರಗ್ಸ್ ಲಿಂಕ್

Spread the love

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ದಂಧೆಯಲ್ಲಿ ಕೇವಲ ಸಿನಿಮಾ ತಾರೆಯರು ಮಾತ್ರವಲ್ಲದೇ ಸೀರಿಯಲ್ ನಟಿಯರಿಗೂ ಡ್ರಗ್ಸ್ ಲಿಂಕ್ ಇರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ತನಿಖೆ ವೇಳೆ ಸಾಕಷ್ಟು ಮಾಹಿತಿ ಲಭಿಸಿದೆ. ಇದರ ಅನ್ವಯ ಕೆಲ ಸ್ಯಾಂಡಲ್‍ವುಡ್ ನಟಿಯರಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇತ್ತ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ವಿಚಾರಣೆ ವೇಳೆ ಮಹತ್ವದ ಮಾಹಿತಿ ಹೊರ ಬಂದಿದೆ. ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪಿಗಳೊಂದಿಗೆ ಸುಮಾರು 12 ಮಂದಿ ಧಾರಾವಾಹಿ ನಟಿಯರು ನಂಟು ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ 12 ಮಂದಿ ನಟಿಯರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡುವ ಸಾಧ್ಯತೆ ಇದೆ.

ಪೊಲೀಸ್ ಮೂಲಗಳ ಮಾಹಿತಿಯ ಅನ್ವಯ ಇಂದು ಖ್ಯಾತ ಧಾರಾವಾಹಿ ನಟಿಯೊಬ್ಬರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಕಾರ್ತಿಕ್ ರಾಜ್ ಹೇಳಿಕೆ ಆಧರಿಸಿ ನೋಟಿಸ್ ನೀಡಲಾಗುತ್ತಿದ್ದು, ಕಾರ್ತಿಕ್ ರಾಜ್ ಬಳಿ ಇದ್ದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನೊಂದಿಗೆ ಸಂಪರ್ಕ ಹೊಂದಿದ್ದ ನಟ-ನಟಿಯರು, ಮೊಬೈಲ್ ಚಾಟ್ ಸೇರಿದಂತೆ ಫೋಟೋ ಹಾಗೂ ವಿಡಿಯೋಗಳ ಪರಿಶೀಲನೆಯನ್ನು ಪೊಲೀಸರು ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ