Breaking News
Home / ಜಿಲ್ಲೆ / ಬೆಳಗಾವಿ / ಎರಡು ರಾಷ್ಟ್ರೀಯ ಪಕ್ಷಗಳಿಗೆ ಸಂತೋಷ ಪಾಟೀಲ್​​ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.

ಎರಡು ರಾಷ್ಟ್ರೀಯ ಪಕ್ಷಗಳಿಗೆ ಸಂತೋಷ ಪಾಟೀಲ್​​ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.

Spread the love

ಬೆಳಗಾವಿ: ಕೆ.ಎಸ್. ಈಶ್ವರಪ್ಪ ವಿರುದ್ದ 40 ಪರ್ಸೆಂಟ್​​ ಕಮಿಷನ್​​ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ ಪಾಟೀಲ್​​ ಕುಟುಂಬಕ್ಕೆ ನ್ಯಾಯ ಸಿಗುವುದು ಅನುಮಾನ ಎಂದು ಆಪ್ ಮುಖಂಡ ಭಾಸ್ಕರ್‌ ರಾವ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಶ್ವರಪ್ಪ ಹಾಗೂ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಸಂತೋಷ ಪಾಟೀಲ್​​ ಕೆಲಸ ಮಾಡಿದ್ದನು‌. ಆದರೆ ಮಾಜಿ ಸಚಿವರು ಬಿಲ್ ಮಂಜೂರು ಮಾಡಲು ಕಾಯಿಸುವ ಜತೆಗೆ ಸಂತೋಷ ಪಾಟೀಲ್​​ ಅವರನ್ನು ಅವಮಾನ ಮಾಡಿದರು. ಇದೇ ಗುತ್ತಿಗೆದಾರನ ಆತ್ಮಹತ್ಯೆಗೆ ಕಾರಣವಾಯಿತು ಎಂದು ಆರೋಪಿಸಿದರು.

ಎರಡು ರಾಷ್ಟ್ರೀಯ ಪಕ್ಷಗಳಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಮಗಾರಿ ಪ್ರಾರಂಭವಾದ ಬಳಿಕವಾದರೂ ಹಣ ಬಿಡುಗಡೆ ಮಾಡಿಸಬೇಕಿತ್ತು. ಆದರೀಗ ಮೊಸಳೆ ಕಣ್ಣೀರು ಸುರಿಸುವುದನ್ನು ಎರಡು ಪಕ್ಷಗಳು ಬಿಡಬೇಕು. ನಾವು ಪಕ್ಷಗಳ ದುರಾಡಳಿತ, ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತೇವೆ. ಭ್ರಷ್ಟಾಚಾರದಿಂದ ನೇರವಾಗಿ ಜನರ ಮೇಲೆ ಪರಿಣಾಮ ಬೀರಲಿದೆ. ಸಂತೋಷ್ ಪಾಟೀಲ್ ಮನವಿ ಮಾಡಿದ್ದಾಗ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಸಂತೋಷ ಪಾಟೀಲ್ ಕೊಟ್ಟಿದ್ದ ಮನವಿ ಇಂದು ಕೂಡ ವಿಚಾರಣೆ ಆಗಿಲ್ಲ. ನಾವು ಅಥವಾ ನೀವು ಯಾರಾದರೂ ಅಪರಾಧ ಮಾಡಿದ್ದರೆ ಇಷ್ಟೊತ್ತಿಗೆ ಹಿಂಡಲಗಾ ಜೈಲಿನಲ್ಲಿ ಇರುತ್ತಿದ್ದೆವು ಎಂದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ