Breaking News

ರಾಜಕಾರಣದಲ್ಲಿ ಯಾರು ಸತ್ಯವಂತರು?: ಹೆಚ್.ಡಿ ದೇವೇಗೌಡ ಪ್ರಶ್ನೆ

Spread the love

ಮೈಸೂರು: ಭ್ರಷ್ಟಾಚಾರ ಎಲ್ಲಾ ಕಡೆ ತುಂಬಿ ಹೋಗಿದೆ. ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ. ರಾಜಕಾರಣದಲ್ಲಿ ಯಾರು ಸತ್ಯವಂತರು? ಎಂದು ಮಾಜಿ ಪ್ರಧಾನಿ, ಜೆಡಿಎಸ್​​ ವರಿಷ್ಠ ಹೆಚ್.ಡಿ ದೇವೇಗೌಡ ಪ್ರಶ್ನಿಸಿದ್ದಾರೆ. ಇಂದು ‘ಜೆಡಿಎಸ್ ಜನತಾ ಜಲಧಾರೆ’ ಕಾರ್ಯಕ್ರಮ ಉದ್ಘಾಟನೆಗೆ ಹೆಚ್.ಡಿ ಕೋಟೆಯ ಬೀಚನಹಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪರ್ಸೆಂಟೇಜ್ ವಿಚಾರವಾಗಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಅವರ ಮೇಲೆ ಇವರು, ಇವರ ಮೇಲೆ ಅವರು ಮಾತನಾಡುತ್ತಾರೆ. ಕಾಂಗ್ರೆಸ್​​ನವರು ಏನು ಮಾಡಿಯೇ ಇಲ್ಲವೇ?, ಯಾರು ಸಾಚ ಇದ್ದಾರೆ ಹೇಳಿ? ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಶೇ.10 ಸರ್ಕಾರ ಎಂದು ಪ್ರಧಾನಿಯವರೇ ಆರೋಪ ಮಾಡಿದ್ದರು. ಆಗ ನಾನು ಯಾವುದೇ ಆರೋಪ ಮಾಡಿರಲಿಲ್ಲ. ಈಗಲೂ ಅಷ್ಟೇ. ‌ ಪರ್ಸೆಂಟೇಜ್ ವಿಚಾರಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಗುತ್ತಿಗೆದಾರರ ಸಂಘದ 40 ಪರ್ಸೆಂಟ್​​ ಕಮಿಷನ್ ಆರೋಪಕ್ಕೂ ನನಗೂ ಸಂಬಂಧವಿಲ್ಲ. ನನ್ನ‌ ಮಗ ನೀರಾವರಿ ಸಚಿವ ಅಥವಾ ಪಿಡಬ್ಲ್ಯೂಡಿ ಮಿನಿಸ್ಟರ್ ಆಗಿದ್ದರೇ ನಾನು ಮಾತನಾಡುತ್ತಿದ್ದೆ. ಈಗ ಆರೋಪಕ್ಕೂ ನನಗೂ ಸಂಬಂಧವಿಲ್ಲ. ಆರೋಪ ಮಾಡಿಕೊಳ್ಳಲಿ ಬಿಡಿ ನಮಗೇನು ಎಂದರು.

ಬಿಜೆಪಿ ಜತೆ ಚುನಾವಣಾ ಪೂರ್ವ ಮೈತ್ರಿ ವಿಚಾರದಲ್ಲಿ ಕೆಲವರು ಉತ್ಪ್ರೇಕ್ಷೆಯಿಂದ ಮಾತನಾಡುತ್ತಾರೆ. ಜೆಡಿಎಸ್ ಕಾರ್ಯಕ್ರಮ ನೋಡಿ ಒಂದಲ್ಲಾ ಒಂದು ಬಣ್ಣ ಕಟ್ಟುತ್ತಾರೆ. ನಮ್ಮ ಜೊತೆ ಇಲ್ಲಿಗೆ ಯಾರಾದರೂ ಬಂದಿದ್ದಾರೆ?, ಸುಮ್ಮನೆ ಯಾರೋ ಏನೇನೋ ಹೇಳುತ್ತಾರೆ, ಹೇಳಲಿ ಬಿಡಿ ಎಂದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ