Breaking News

ತಂದೆ-ಮಗನ ಗಾಂಜಾ ದಂಧೆ.. ಪೊಲೀಸ್​ ದಾಳಿಯಲ್ಲಿ ಸಿಕ್ಕಿಬಿದ್ದ ಪುತ್ರ

Spread the love

ಬೆಂಗಳೂರು : ಮಾದಕ ವಸ್ತು ಮಾರಾಟ ದಂಧೆಯಲ್ಲಿ ಸಕ್ರಿಯನಾಗಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಎಚ್.ಎಸ್.ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಾಧಿಕ್ ಎಂದು ಗುರುತಿಸಲಾಗಿದೆ. ಏಪ್ರಿಲ್ 12ರಂದು‌ ಎಚ್.ಎಸ್.ಆರ್ ಲೇಔಟ್ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಟಿವಿಎಸ್ ಎಕ್ಸೆಲ್ ನಲ್ಲಿ ತಿರುಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಯಿಂದ 5 ಕೆ.ಜಿ 300 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಬಳಿಕ ಹೆಚ್ಚಿನ ವಿಚಾರಣೆ ವೇಳೆ ಆರೋಪಿಯು ತನ್ನ ತಂದೆ ಅಮೀರ್ ಜೊತೆಗೂಡಿ, ಒಡಿಶಾದಿಂದ ತಮಿಳುನಾಡಿಗೆ ಗಾಂಜಾ ತರಿಸಿಕೊಂಡು ಬಳಿಕ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದುದಾಗಿ ಹೇಳಿದ್ದಾರೆ. ಆರೋಪಿಯ ಮಾಹಿತಿ ಮೇರೆಗೆ ಒಟ್ಟು 52.50 ಲಕ್ಷ ಮೌಲ್ಯದ 105 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಮಗ ಸಾಧಿಕ್ ಬಂಧನದ ನಂತರ ತಂದೆ ಅಮೀರ್ ನಾಪತ್ತೆಯಾಗಿದ್ದು ಹೆಚ್.ಎಸ್.ಆರ್ ಲೇಔಟ್ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ