Breaking News

ಗುಜರಾತ್‌ನಲ್ಲಿನ 108 ಅಡಿ ಎತ್ತರದ ʻಹನುಮಾನ್ ಪ್ರತಿಮೆʼಯನ್ನು ಅನಾವರಣಗೊಳಿಸಿದ ಪ್ರಧಾನಿ ಮೋದಿ

Spread the love

ಗುಜರಾತ್‌: ಇಂದು ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.

 

ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್‌ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ

Spread the love ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ ಚಿಕ್ಕೋಡಿ:ಲಿಂಗಾಯತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ