Breaking News

ಹಳೇ ಹುಬ್ಬಳ್ಳಿ ಉದ್ವಿಗ್ನ, ಪೊಲೀಸರ ಮೇಲೆ ಕಲ್ಲು ತೂರಾಟ

Spread the love

ಹುಬ್ಬಳ್ಳಿ: ಮಸೀದಿಯ ಚಿತ್ರದ‌ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರ ಎಡಿಟ್‌ ಮಾಡಿ ಯುವಕನೊಬ್ಬ ಸ್ಟೇಟಸ್‌ ಹಾಕಿಕೊಂಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ತಡರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

 

‘ತಲೆ ಕೆಟ್ಟರೆ ಇಲ್ಲೂ ಭಗವಾಧ್ವಜ ಹಾರಿಸುವೆ, ಜೈ ಶ್ರೀರಾಮ್‌, ಹಿಂದೂ ಸಾಮ್ರಾಟ್‌’ ಎಂದು ಚಿತ್ರದ ಮೇಲೆ ಬರೆಯಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿದೆ. ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ಅಭಿಷೇಕ್‌ ಹಿರೇಮಠ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಸಮೀಪದಲ್ಲಿಯೇ ಕಲ್ಲುತೂರಾಟ ನಡೆದಿದ್ದು, ಸಮೀಪದ ಆಸ್ಪತ್ರೆ ಮೇಲೂ ದಾಳಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಪೊಲೀಸ್‌ ವಾಹನಗಳು ಜಖಂಗೊಂಡಿವೆ. ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣ ಕ್ರಮವಾಗಿ ನಿಷೇಧಾಜ್ಞೆ ವಿಧಿಸಲಾಗಿದೆ.

ಕಲ್ಲು ತೂರಾಟ: ವಿಡಿಯೊ ವೈರಲ್‌ ಆಗುತ್ತಿದ್ದಂತೆ ಆಕ್ರೋಶಗೊಂಡ ಮುಸ್ಲಿಮರು ಕಲ್ಲು ತೂರಾಟ ಮಾಡಿದರು. ಇದನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಉದ್ವಿಗ್ನ ಗುಂಪಿನವರು ಪೊಲೀಸ್‌ ವಾಹನಗಳ ಮೇಲೆ ಕಲ್ಲು ಎಸೆದಿದ್ದಾರೆ. ಕಾನ್‌ಸ್ಟೆಬಲ್ ಗುರುಪಾದಪ್ಪ ಸ್ವಾದಿ, ಪೂರ್ವ ಸಂಚಾರ ಇನ್‌ಸ್ಪೆಕ್ಟರ್ ಕಾಡದೇವರಮಠ ಗಾಯಗೊಂಡಿದ್ದಾರೆ. ಸಾರ್ವಜನಿಕರಿಗೂ ಗಾಯಗಳಾಗಿವೆ.

ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಅವರು ಮುಸ್ಲಿಂ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದರು. ಘಟನೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಘಟನೆ ನಡೆದ ಸುತ್ತಲಿನ ಪ್ರದೇಶದಲ್ಲಿದ್ದ ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಲಾಭೂರಾಮ್‌ ತಡರಾತ್ರಿವರೆಗೆ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದರು.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ