ಗದಗ : ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ (Kalasa Banduri Project) ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ ಬಂಡೂರಿ ಕಾಮಗಾರಿ ಸಂಬಂಧ ಈಗಾಗಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಅನುಮತಿಗೆ ವಿನಂತಿಸಲಾಗಿದೆ.
ಈ ಯೋಜನೆಯಿಂದ ಹೆಚ್ಚು ಅರಣ್ಯ ಪ್ರದೇಶ ನಾಶವಾಗದಂತೆ ಗಮನ ನೀಡಿ ಡಿಪಿಆರ್ ತಯಾರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಪ್ರಸಕ್ತ ಸಾಲಿನಲ್ಲಿಯೇ ಕಳಸಾ ಬಂಡೂರಿ ಕಾಮಗಾರಿ ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.