ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷಕ್ಕೆ ಸೇರಿದಂತ ಮಾಜಿ ಸಚಿವ ಸಿಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹೆಚ್ ಕೆ ಕುಮಾರಸ್ವಾಮಿ ಹಸ್ತಾಂತರಿಸಿದರು. ಈ ವೇಳೆ ಮಾತನಾಡೋದಕ್ಕೆ ಆರಂಭಿಸಿದ ಅವರು, ಕಾರ್ಯಕ್ರಮದಲ್ಲಿ ಗಳಗಳ ಎಂದು ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.
ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿದ ಬಳಿಕ, ಅಳುತ್ತಲೇ ಮಾತನಾಡಿದಂತ ಹೆಚ್ ಕೆ ಕುಮಾರಸ್ವಾಮಿಯವರು, ನಾನಾಗಿಯೇ ಪಕ್ಷದಲ್ಲಿ ಏನನ್ನೂ ಕೇಳಿಲ್ಲ. ಪಕ್ಷ ಎಲ್ಲವನ್ನೂ ಕೊಟ್ಟಿದೆ. ನನ್ನನ್ನು ಗುರುತಿಸಿ ಈ ಮಟ್ಟಕ್ಕೆ ಬೆಳೆಸಿದೆ. ಎಲ್ಲಾ ಕಾರ್ಯಕ್ರಮಗಳಿಗೂ ಕುಮಾರಸ್ವಾಮಿ ಒಬ್ಬರೇ ಓಡಾಡಬೇಕಾದ ಪರಿಸ್ಥಿತಿ ಇದೆ ಎಂದರು.