Breaking News

ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿದ ಬೆನ್ನಲ್ಲೇ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

Spread the love

ಮಂಗಳೂರು: ನಗರದ ಅಗ್ನಿಶಾಮಕದಳ ಕಚೇರಿಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗಂಗಾಧರ ಬಿ. ಕಮ್ಮಾರ (36) ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕುಂಟಿಕಾನ ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ.

 

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಯಚೂರು ಜಿಲ್ಲೆ ಲಿಂಗಸಗೂರುನಲ್ಲಿದ್ದ ಅವರ ಪತ್ನಿ ಶ್ರುತಿ (30) ತಮ್ಮ 6 ತಿಂಗಳ ಮಗು ಅಭಿರಾಮನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ರಾತ್ರಿ 8.50ರ ವೇಳೆಗೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಕುಂದಾಪುರ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾತ್ರಿ 10 ಗಂಟೆಯ ವೇಳೆಗೆ ತನ್ನ ತಮ್ಮನ ಮನೆಯಲ್ಲಿದ್ದ ಶ್ರುತಿ ಅವರಿಗೆ ಈ ವಿಷಯ ತಿಳಿದು ಬಂದಿದ್ದು, ತೀವ್ರ ಆಘಾತಕ್ಕೆ ಒಳಗಾದ ಅವರು ಮಗುವನ್ನೂ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪಘಾತ ಕುರಿತಂತೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ